ಕೊರೋನಾ ವೈರಸ್ ಭೀತಿ ; ಚಾಮರಾಜನಗರದಲ್ಲಿ ಹೈ ಅಲರ್ಟ್

ಚಾಮರಾಜನಗರ: ಕೇರಳದಲ್ಲಿ ಕೊರೋನಾ ವೈರಸ್ ಪತ್ತೆಯಾಗಿರುವುದರಿಂದ ಚಾಮರಾಜನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಹಾಗೂ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ತಲಾ 5 ಹಾಸಿಗೆಯುಳ್ಳ ವಾರ್ಡ್ ಗಳನ್ನೂ ಕೊರೋನಾ ವೈರಸ್ ಕುರಿತ ತಪಾಸಣೆಗೆಂದು ಮೀಸಲಿಡಲಾಗಿದೆ.

ಗಡಿಭಾಗದಲ್ಲಿರುವ ಮೂಲೆಹೊಳೆ ಹಾಗೂ ಬಂಡೀಪುರ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವೈದ್ಯಕೀಯ ತಂಡಗಳಿಂದ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಜೊತೆಗೆ ಕರಪತ್ರ ನೀಡಿ ಕೊರೋನ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದು ಚಾಮರಾಜನಗರ ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ

Related posts