ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಕೊರೋನಾ ಸೋಂಕು ಕಂಡುಬಂದಿದೆ. ಅವರನ್ನು ಕೊರೋನಾ ಪರೀಕ್ಷೆಗೆ ಗುರಿಪಡಿಸಿದಾಗ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿದ್ದ ಅಮಿತಾಭ್ ಬಚ್ಚನ್, ತಾವು ಕೊರೋನಾ ಸೋಂಕಿಗೊಳಗಾಗಿರುವುದಾಗಿ ಹೇಳಿಕೊಂಡಿದ್ದಾರೆ. . ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಕುಟುಂಬ ಹಾಗೂ ಸಿಬ್ಬಂದಿ ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ ಎಂದಿರುವ ಅಮಿತಾಬ್ ಬಚ್ಚನ್, ಕಳೆದ 10 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕೆಂದು ಮನವಿ ಮಾಡಿದ್ದಾರೆ.
T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited ..
All that have been in close proximity to me in the last 10 days are requested to please get themselves tested !— Amitabh Bachchan (@SrBachchan) July 11, 2020
ಈ ನಡುವೆ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.