ರಾಜ್ಯದಲ್ಲಿ ಮತ್ತೆ 16 ಮಂದಿಯಲ್ಲಿ ಕೊರೋನಾ ಸೋಂಕು

ಬೆಂಗಳೂರು: ಜಗತ್ತಿನಾದ್ಯಂತ ತನ್ನ ಬಾಹುವನ್ನು ಚಾಚುತ್ತಿರುವ ಕೊರೋನಾ ವೈರಸ್ ಭಾರತದ್ಲಲೂ ತನ್ನ ಸೋಂಕಿನ ವೇಗವನ್ನು ಹೆಚ್ಚಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಮತ್ತಷ್ಟು ಸೋಂಕಿನ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಇಂದು ಬೆಳಗ್ಗಿನ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಭುಧವಾರ ಸಂಜೆ ನಂತರ ಈ ಮಾಧ್ಯಾಹ್ನದವರೆಗೆ ಕರ್ನಾಟಕದಲ್ಲಿ ಮತ್ತೆ 16 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಅಷ್ಟೇ ಅಲ್ಲ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ.

ಈ ಹೆಲ್ತ್ ಬುಲೆಟಿನ್ ನೀಡಿದ ಕಾಳವ್ವಲಕಾರಿ ಮಾಹಿತಿಯಂತೆ ಬೆಂಗಳೂರಿನಲ್ಲಿ ಒಬ್ಬನಿಂದಲೇ 9 ಜನರಿಗೆ ಸೋಂಕು ಹರಡಿದೆ. ಇನ್ನುಳಿದಂತೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಮಂಡ್ಯ ಮೊದಲಾದೆಡೆ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈ ನಡುವೆ, ರಾಜ್ಯದಲ್ಲಿ ಒಟ್ಟು 443 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಲ್ಲಿ 17 ಜನರು ಮೃತಪಟ್ಟಿದ್ದಾರೆ. 141 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಇದನ್ನೂ ಓದಿ.. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡೀರಿ ಜೋಕೆ; 7 ವರ್ಷ ಜೈಲು ಖಚಿತ

 

Related posts