ಕೊರೋನಾ ವೈರಸ್’ಗೆ ತೃಣಮೂಲ ಕಾಂಗ್ರೆಸ್ ಬಲಿ

ಕೋಲ್ಕತಾ: ದೇಶಾದ್ಯಂತ ಕೊರೋನಾ ವೈರಸ್’ಗೆ ಸರಣಿ ಸಾವು ಪ್ರಕರಣಗಳು ಸಂಭವಿಸುತ್ತಿದ್ದು ಪಶ್ಚಿಮ ಬಂಗಾಳದ ಶಾಸಕರೊಬ್ಬರು ಬಲಿಯಾಗಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್ (60) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸುಮಾರು ಒಂದು ತಿಂಗಳಿನಿಂದ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಘೋಷ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘೋಷ್ ಅವರ ಸಾವಿಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಘೋಷ್ಅವರ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂದಿದ್ದಾರೆ.

Related posts