ಬೆಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕೆಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರ ಈ ಕೂಡಲೇ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಜಾರಿಗೆ ತರುವ ಜೊತೆಗೆ ಅದರ ಜಾರಿ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕೊರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರ ಈ ಕೂಡಲೇ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಜಾರಿಗೆ ತರುವ ಜೊತೆಗೆ ಅದರ ಜಾರಿ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು. 5/9#COVID__19
— Siddaramaiah (@siddaramaiah) June 23, 2020
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕದ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ್ದಾರಿಯುತ ಸರ್ಕಾರ ತನ್ನೆಲ್ಲ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ, ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ @CMofKarnataka ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ್ದಾರಿಯುತ ಸರ್ಕಾರ ತನ್ನೆಲ್ಲ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ, ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ? 1/9#COVID__19 pic.twitter.com/xrRBEOrsWE
— Siddaramaiah (@siddaramaiah) June 23, 2020