ಮಿಚಾಂಗ್ ಚಂಡಮಾರುತ; ಭಾತೀ ಮಳೆಯಿಂದಾಗಿ ತಮಿಳುನಾಡಿನಲ್ಲಿ ಜನಜೀವನ ಅಸ್ತವ್ಯಸ್ತ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ತಮಿಳುನಾಡು ಹಾಗೂ ಪೂರ್ವದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.

ಮಳೆ ಹಿನ್ನೆಲೆಯಲ್ಲಿ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು,ಕಾಂಚೀಪುರಂ ಸಹಿತ ಹಲವು ಜಿಲ್ಲೆಗಳಲ್ಲಿ ಸೋಮವಾರ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ನಡುವೆ, ತಮಿಳುನಾಡಿನ ಚೆನ್ನೈನಲ್ಲಿ ಭಾರಿ ಮಳೆ: ಮೈಸೂರು, ಬೆಂಗಳೂರು ಎಕ್ಸ್‌ಪ್ರೆಸ್ ಸೇರಿದಂತೆ 11 ರೈಲುಗಳು ರಡಾಗಿವೆ. ಡಿಸೇಂಬರ್ 7ರವರೆಗೆ ಸುಮಾರು 144 ರೈಲುಗಳ ಸೇವೆಯನ್ನು ರದ್ದಾಗಿವೆ ಎಂದು ಮೂಲಗಳು ತಿಳಿಸಿವೆ.

Related posts