ಏಷ್ಯನ್ ಗೇಮ್ಸ್ ಸಾಧಕರಿಗೆ ವಿಧಾನಸೌಧದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಸನ್ಮಾನ

ಬೆಂಗಳೂರು: 2026ರ ಏಷ್ಯನ್ ಗೇಮ್ಸ್‌ನಲ್ಲಿ ಅದ್ಭುತ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ರಾಜ್ಯದ ಕ್ರೀಡಾಪಟುಗಳಾದ ಮೋಹಿತ್ ಎಚ್.ಎಸ್., ಅದಿತಿ ಅಶೋಕ್, ಪೂವಮ್ಮ, ಆಯುಷ್ ಶೆಟ್ಟಿ, ತಿಲೋತ್ತಮಾ ಸೇನ್, ಶ್ರೇಯಾಂಕ ಪಾಟೀಲ್ ಹಾಗೂ ಸ್ನೇಹ ಎಸ್.ಎಸ್. ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ವಿಧಾನಸೌಧದಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.

ಕ್ರೀಡಾಪಟುಗಳ ಐತಿಹಾಸಿಕ ಸಾಧನೆ ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಅವರ ಕಠಿಣ ಪರಿಶ್ರಮ, ಛಲ ಹಾಗೂ ಕ್ರೀಡಾಭಕ್ತಿ ರಾಜ್ಯದ ಯುವ ಪೀಳಿಗೆಗೆ ಅತ್ಯುತ್ತಮ ಸ್ಫೂರ್ತಿಯಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಈ ಎಲ್ಲ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಿ ಕರ್ನಾಟಕ ಹಾಗೂ ದೇಶದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಲಿ ಎಂದು ಅವರು ಆಶಿಸಿದರು.

ಕ್ರೀಡೆ ಹಾಗೂ ಕ್ರೀಡಾಪಟುಗಳ ಏಳಿಗೆಗೆ ರಾಜ್ಯ ಸರ್ಕಾರ ಸದಾ ಬೆಂಬಲವಾಗಿ ನಿಲ್ಲಲಿದೆ. ಪ್ರತಿಭಾವಂತ ಕ್ರೀಡಾಪಟುಗಳಿಗೆ ಅಗತ್ಯ ಪ್ರೋತ್ಸಾಹ ಮತ್ತು ಸಹಕಾರ ನೀಡುವ ಮೂಲಕ ಅವರು ಮತ್ತಷ್ಟು ಸಾಧನೆ ಮಾಡಲು ಸರ್ಕಾರ ನೆರವಾಗಲಿದೆ ಎಂದು ಶಿವಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಮತ್ತು ಯುವಜನ ಸೇವೆ ಸಚಿವ ಡಾ. ಜಿ. ಪರಮೇಶ್ವರ, ಕರ್ನಾಟಕ ಒಲಿಂಪಿಕ್ ಒಕ್ಕೂಟದ ಅಧ್ಯಕ್ಷ ಡಾ. ಕೆ. ಗೋವಿಂದರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts