ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಸಿಡಿದೆದ್ದಿದ್ದಾರೆ. ಜಿಲ್ಲಾಡಳಿತದ ನಡೆಯನ್ನು ಖಂಡಿಸಿ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮೂಡಬಿದಿರೆ ಕ್ಷೇತ್ರದ ಇರುವೈಲು ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಚಾರ ನೆಪದಲ್ಲಿ ರದ್ದುಪಡಿಸಿ ಅಧಿಕಾರಿಗಳನ್ನು ಅಮಾನತು ಗೊಳಿಸಲಾಗಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದಾರೆ. ಈ ಕ್ರಮವನ್ನು ಖಂಡಿಸಿ ಹಾಗೂ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯುವಂತೆ ಶಾಸಕರು ಆಗ್ರಹಿಸಿದ್ದಾರೆ.
ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಬೆಳಿಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಧರಣಿ ಕೈಗೊಂಡು ಗಮನಸೆಳೆದರು. ಶಾಸಕರಾದ ರಾಜೇಶ್ ನಾಯ್ಕ್, ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಿದ್ದರು.