ಮೈಸೂರಿನಲ್ಲಿ ‘ಸಿಎಂ ಕಪ್ 2026’ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಮೈಸೂರು: ದಸರಾ ಉತ್ಸವದ ಅಂಗವಾಗಿ ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ‘ಸಿಎಂ ಕಪ್ 2026’ಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ವತಿಯಿಂದ ಕ್ರೀಡಾಕೂಟ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಗಾಲ್ಫ್ ಪದಕ ಗೆದ್ದ ಪ್ರಣವಿ ಉರ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು ಸನ್ಮಾನಿಸಿ, ಸಾಧನೆಗಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ಸಿ. ಪುಟ್ಟರಂಗಶೆಟ್ಟಿ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಅಧ್ಯಕ್ಷ ಅನಿಲ್ ಕುಮಾರ್ ಸಿ., ಶಾಸಕರಾದ ತನ್ವೀರ್ ಸೇಠ್ ಮತ್ತು ಡಿ. ರವಿಶಂಕರ್, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಹಾಗೂ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್ ಉಪಸ್ಥಿತರಿದ್ದರು.

Related posts