ದೇಗುಲ ದರ್ಶನಕ್ಕೆ ಸಿದ್ಧತೆ; ಪುರಾಣ ಪ್ರಸಿದ್ಧ ಪೊಳಲಿ ಕ್ಷೇತ್ರದಲ್ಲಿ ಪರಿಪೂರ್ಣ ತಯಾರಿ

ಮಂಗಳೂರು: ಕೊರೋನಾ ವೈರಾಣು ಸೋಂಕು ತಡೆಯುವ ಉದ್ದೇಶದಿಂದ ಮುಚ್ಚಲ್ಪಟ್ಟಿದ್ದ ದೇವಾಲಯಗಳು ಸೋಮವಾರದಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ.  ಸರ್ಕಾರದ ಆದೇಶದಂತೆ ಮಾರ್ಗಸೂಚಿ ನಿಯಮಗಳನ್ನು ಅನುಸರಿಸುವುದು ಕಡ್ಡಾಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿದ್ದಾರೆ.

ಪೊಳಲಿ ಕ್ಷೇತ್ರದಲ್ಲಿ ಪರಿಪೂರ್ಣ ತಯಾರಿ:

ರಾಜ್ಯ ಕರಾವಳಿಯ ಪೊಳಲಿ ರಾಜರಾಜೇಶ್ವರಿ ದೇವಾಲಯ ನಮ್ಮ ದೇಶದ ಪ್ರಸಿದ್ಧ ಕ್ಷೇತ್ರಗಲ್ಲಿ ಒಂದು. ನಿತ್ಯ ಪೂಜೆ ನಡೆಯುವ ದೇಶದ ಅತೀ ದೊಡ್ಡ ಮೂರ್ತಿಯಿರುವ ಏಕೈಕ ಶಕ್ತಿ ದೇಗುಲ ಎಂದೇ ಜನಜನಿತವಾಗಿರುವ ಈ ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಆವರಣದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಸ್ಯಾನಿಟೈಸೇಶನ್ ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮೋಕ್ತೇಸರರಾದ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೋಕ್ತೇಸರಾದ ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಮೋಕ್ತೇಸರರಾದ ಮಾಧವ ಭಟ್ ಸಹಿತ ದೇವಾಲಯದ ಅರ್ಚಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇದೇ ವೇಳೆ, ಕ್ಷೇತ್ರದ ಆಡಳಿತ ಮಂಡಳಿಯ ಸಭೆ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮಾರ್ಗಸೂಚಿ ಜಾರಿ ಕುರಿತು ಚರ್ಚಿಸಲಾಯಿತು.

ಕೊರೋನಾ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು ಸರಕಾರದಿಂದ ಮುಂದಿನ ಆದೇಶ ಬರುವವರೆಗೆ ಯಾವುದೇ ಸೇವೆಗಳು ಲಭ್ಯವಿಲ್ಲ. ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕೆಂದು ಶಾಸಕರು ದೇವಾಲಯದ ಮೇಲಿಚಾರಕರಿಗೆ ಸಲಹೆ ಮಾಡಿದರು.

ಇದನ್ನೂ ಓದಿ.. ದೇವಾಲಯಗಳಲ್ಲಿ ಹೇಗಿರಬೇಕು; ಸರ್ಕಾರದಿಂದ ಮಾರ್ಗಸೂಚಿ

 

Related posts