SC-ST ಮೀಸಲಾತಿ: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಹೆಚ್ಚಳವನ್ನು ರದ್ದುಪಡಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ಮೀಸಲಾತಿ ವಿಚಾರವನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವ ಸಾಧ್ಯತೆ ಸೇರಿದಂತೆ ಮುಂದಿನ ಕಾನೂನಾತ್ಮಕ ಮತ್ತು ಆಡಳಿತಾತ್ಮಕ ಕ್ರಮಗಳ ಕುರಿತು ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Related posts