ಬೆಂಗಳೂರು: ಕೊರೋನಾ ವಿಚಾರದಲ್ಲಿ ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆನ್ನಲಾದ ವಿಚಾರ ಮುಂದಿಟ್ಟು ಕಾಂಗ್ರೆಸ್ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಶ್ರೀರಾಮುಲು, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಶ್ರೀರಾಮುಲು, ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, ಆರೋಪಗಳು ‘ಸತ್ಯಕ್ಕೆ ದೂರವಾದದ್ದು’, ‘ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ’ ಎಂದು ಹೇಳುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು ಎಂದು ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಚಿವರು ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ ಎಂದು ಶ್ರೀರಾಮುಲು ಟ್ವೀಟ್’ನಲ್ಲಿ ಹೇಳಿದ್ದಾರೆ. .
ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.
ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, 1/2
— B Sriramulu (Modi Ka Parivar) (@sriramulubjp) July 16, 2020
2/3
ಆರೋಪಗಳು 'ಸತ್ಯಕ್ಕೆ ದೂರವಾದದ್ದು', 'ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ' ಎಂದು ಹೇಳುವ ಸಂರ್ಭದಲ್ಲಿ, 'ಇನ್ನೂ ಎಡವಿದರೆ ದೇವರೇ ಕಾಪಾಡಬೇಕು' ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು.— B Sriramulu (Modi Ka Parivar) (@sriramulubjp) July 16, 2020