ಹಿಂದೆ ಬಿಎಸ್‌ವೈ ರಾಜೀನಾಮೆ ನೀಡಿದ್ದರೇ? ಬಿಜೆಪಿ ನಾಯಕರಿಗೆ ಮಂಜುನಾಥ ಭಂಡಾರಿ ಪ್ರಶ್ನೆ

ಮಂಗಳೂರು: ಮುಡಾ ಪ್ರಕರಣದ ಕಾರಣಕ್ಜಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿಲ್ಲ, ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ರಾಜಕೀಯಕ್ಕೆ ಕಳಂಕ ತರಲು ಹೊರಟಿರುವ ಬಿಜೆಪಿ ವಿರುದ್ದ ಸಿಎಂ ಕಾನೂನು ಹೋರಾಟ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು.

ಬಿ.ಎಸ್‌.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಚೆಕ್‌ ಮೂಲಕ ಲಂಚ ಸ್ವೀಕರಿಸಿದ ಹಾಗೂ ಡಿನೋಟಿಫಿಕೇಶನ್‌ ಪ್ರಕರಣಗಳಲ್ಲಿ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾಗ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾದರೂ ರಾಜೀನಾಮೆ ನೀಡಿರಲಿಲ್ಲ. ಲೋಕಾಯುಕ್ತ ತನಿಖೆಯಲ್ಲಿ ತಪ್ಪಿತಸ್ಥ ಎಂದು ದೃಢಪಟ್ಟ ಬಳಿಕವಷ್ಟೇ ರಾಜೀನಾಮೆ ನೀಡಿದ್ದರು ಎಂದು ಮಂಜುನಾಥ ಭಂಡಾರಿ ನೆನಪಿಸಿದರು.

ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿನ ಸರ್ಕಾರ ಪತನಗೊಳಿಸುವ ಷಡ್ಯಂತ್ರವನ್ನು ಬಿಜೆಪಿ ನಡೆಸುತ್ತಲೇ ಬಂದಿದೆ ಮಂಜುನಾಥ ಭಂಡಾರಿ ದೂರಿದರು.

Related posts