ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಡೀಸೆಲ್ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದಲೇ ತೆರಿಗೆ ಜಾರಿಗೆ ಬರಲಿದ್ದು ಈ ಹಿಂದೆ ಶೇ 18.44 ರಷ್ಟು ಇದ್ದ ತೆರಿಗೆ, ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಲಿದ್ದು, ಬೆಲೆ ಏರಿಕೆಯಿಂದ ಡೀಸೆಲ್ ಬೆಲೆ ಸುಮೇರು 90 ರೂಪಾಯಿ ತಲುಪಲಿದೆ ಎನ್ನಲಾಗುತ್ತಿದೆ.