ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ವಿರಮಿಸಲ್ಲ ಎಂದಿರುವ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.
ಮೈಸೂರು ಚಲೋ ಪಾದಯಾತ್ರೆ ಯ ಸಮಾರೋಪ ಸಂದರ್ಭದಲ್ಲಿ ಮಾತನಾಡಿರುವ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯನವರೇ, ನನ್ನ ಬದುಕಿನ ಕೊನೆಯುಸಿರು ಇರುವವರೆಗೆ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳುಹಿಸವರೆಗೂ ಹೋರಾಟ ಮಾಡುತ್ತೇನೆ ಎಂದರು.
ಸಿಎಂ ಸಿದ್ದರಾಮಯ್ಯನವರೇ, ನನ್ನ ಬದುಕಿನ ಕೊನೆಯುಸಿರು ಇರುವವರೆಗೆ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳುಹಿಸವರೆಗೂ ಹೋರಾಟ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಬೇಸತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿದೆ. ಇನ್ನೊಬ್ಬರ ಕುರಿತು ಹಗುರವಾಗಿ ಮಾತನಾಡುವುದು ಬಿಟ್ಟು,… pic.twitter.com/NMsTzVodLX
— BJP Karnataka (@BJP4Karnataka) August 10, 2024
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಬೇಸತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿದೆ. ಇನ್ನೊಬ್ಬರ ಕುರಿತು ಹಗುರವಾಗಿ ಮಾತನಾಡುವುದು ಬಿಟ್ಟು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ಎಂದು ಬಿಎಸ್‌ವೈ ಕುಟುಕಿದ್ದಾರೆ.
ಭ್ರಷ್ಟ ಸಿಎಂ, ಡಿಸಿಎಂ ಇರುವವರೆಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ. ಕನ್ನಡಿಗರು ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್ ನಾಯಕರೇ ನಿಮಗೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ.
– ಶ್ರೀ @BSYBJP , ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ… pic.twitter.com/KdmvMhZKXN
— BJP Karnataka (@BJP4Karnataka) August 10, 2024
ಭ್ರಷ್ಟ ಸಿಎಂ, ಡಿಸಿಎಂ ಇರುವವರೆಗೂ ನಾಡಿನ ಅಭಿವೃದ್ಧಿ ಸಾಧ್ಯವಿಲ್ಲ. ಕನ್ನಡಿಗರು ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಿದ್ದರಾಗಿದ್ದಾರೆ ಎಂದ ಯಡಿಯೂರಪ್ಪ, ನಿಮಗೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ, ಚುನಾವಣೆಗೆ ಹೋಗೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.