ಡಿಕೆಶಿಗೆ ಸಂಕಷ್ಟ; ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ‌ ವಿಚಾರಣೆ ಕುರಿತಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ತಮ್ಮ ವಿರುದ್ಧದ ಅಕ್ರಮ ಆಸ್ತಿ ಕುರಿತಂತೆ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಡಿಕೆಶಿಯವರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿತ್ತು.

ಸರ್ಕಾರದ ಈ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೊರೆಹೋಗಿದ್ದು ವಿಚಾರಣೆ ನಡೆಸಿರುವ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಆದೇಶ ಪ್ರಕಟಿಸಿರುವ ಹೈಕೋರ್ಟ್, ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ನಿರ್ದೇಶಿಸಿದೆ.

Related posts