ಯೋಗಿ ಆದಿತ್ಯನಾಥ್ ಸರ್ಕಾರ ವಜಾಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ಉತ್ತರ ಪ್ರದೇಶ ಕಾರ್ಮಿಕರು ಇತರ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ ಎಂದು ಆದೇಶಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ಧಾರದ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಭಾರತವು ಒಕ್ಕೂಟ ವ್ಯವಸ್ಥೆಯಾಗಿದ್ದು, ಪ್ರತಿಯೊಬ್ಬ ನಾಗರೀಕನಿಗೂ ನಮ್ಮ ಸಂವಿಧಾನ ಒಂದಷ್ಟು ಹಕ್ಕುಗಳನ್ನು ನೀಡಿದೆ. ಅದನ್ನು ಕಸಿದುಕೊಳ್ಳಲು ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ.

ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳು ಸರ್ವಾಧಿಕಾರಿ ಧೋರಣೆ ತೋರುತ್ತಾ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿವೆ. ಇದಕ್ಕೆ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಒಂದು ಉದಾಹರಣೆಯಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

ಆದಿತ್ಯನಾಥ ಅವರನ್ನು ಸಿಎಂ ಸ್ಥಾನದಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಇಡೀ ದೇಶಾದ್ಯಾಂತ ಉಗ್ರ ಹೋರಾಟ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

Related posts