ಸುರೇಶ್ ಅಂಗಡಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ

ಬೆಳಗಾವಿ: ಇತ್ತೀಚೆಗೆ ಕೊರೋನಾ ಸೋಂಕಿನಿಂದ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಬೆಳಗಾವಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು.

ಬೆಳಗಾವಿ ಪ್ರವಾಸದ ಸಂದರ್ಭದಲ್ಲಿ ಅಂಗಡಿ ನಿವಾಸಕ್ಕೆ ತೆರಳಿದ ಅವರು ಮಾಜಿ ಸಚಿವ ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಚ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

Related posts