ಕೊರೋನಾ ಸಂಕಷ್ಟ ಹಿನ್ನೆಲೆ: ವಿಶೇಷ ಅಧಿವೇಶನಕ್ಕೆ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಕೊರೋನಾ ಹಾವಳಿಯಿಂದಾಗಿ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಬೇಕಿದೆ. ಈ ವಿಚಾರದಲ್ಲಿ ರಾಜ್ಯಸರ್ಕಾರ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಿದೆ.

ಶ್ರಮಿಕವರ್ಗಕ್ಕೆ ವಿಶೇಷ ನೆರವಿನ ಪ್ಯಾಕೇಜ್ ಪ್ರಕಟಿಸಿರುವ ಮುಖ್ಯಮಂತ್ರಿಯವರನ್ನು ಅಭಿನಂದಿಸಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಶೇಷ ಬಜೆಟ್ ಅಧಿವೇಶನ ಕರೆಯುವುದು ಸೂಕ್ತ ಎಂಬ ಸಲಹೆಯನ್ನೂ ನೀಡಿದ್ದಾರೆ. ಕೊರೋನಾ ಹಾವಳಿಯಿಂದಾಗಿರುವ ಸಂಕಷ್ಟಗಳ ಬಗ್ಗೆ ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ಡಿ.ಕೆ.ಶಿ. ಆಗ್ರಹಿಸಿದ್ದಾರೆ.

ಈ ಕುರಿತಂತೆ ಡಿ.ಕೆ.ಶಿ. ಅವರು ಮಾಡಿರುವ ಟ್ವೀಟ್ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದೆ. ರಾಜ್ಯದಲ್ಲಿ ಕಾರ್ಮಿಕರು, ರೈತರು ಸಹಿತ ಶ್ರಮಿಕ ವರ್ಗ ತೀವ್ರ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಅವರು ಈ ಟ್ವೀಟ್‌ನಲ್ಲಿ ಬೆಳಕು ಚೆಲ್ಲಿದ್ದಾರೆ.

‘ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸುವುದೇನೆಂದರೆ, ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ.. ಜೊತೆ ಜೊತೆಯಲಿ.. ನನ್ನರಸಿ ರಾಧೆ.. ನಮ್ಮನೆ ಯುವರಾಣಿ.. ಗಟ್ಟಿಮೇಳ.. ಯಾವ ಸೀರಿಯಲ್ ಶೂಟಿಂಗ್? ಲೆಕ್ಕಾಚಾರ ಶುರು.. 

ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ ಅಗತ್ಯವಿದೆ. ಹಾಗಾಗಿ ಈ ಅಧಿವೇಶನ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ ಎಂದಿರುವ ಡಿ.ಕೆ.ಶಿ. ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಹೇಳುವ ಮೂಲಕ ವಿಶೇಷ ಅಧಿವೇಶನದ ಔಚಿತ್ಯದ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ವಿಚಿತ್ರ ಭಕ್ತಿ ಪರಾಕಾಷ್ಠೆ; ಮರ್ಮಾಂಗವನ್ನೇ ಕತ್ತರಿಸಿ ಶಿವನಿಗೆ ಸಮರ್ಪಿಸಿದ ಭೂಪ 

Related posts