ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಲೈಸನ್ಸ್ ರದ್ದು: ಸರ್ಕಾರದ ಎಚ್ಚರಿಕೆ

ಹಾವೇರಿ: ಕೊರೊನಾ‌ ಮಹಾಮಾರಿ ವೈರಸ್ ರುದ್ರನರ್ತನಗಯ್ಯುತ್ತಿರುವ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಹೀಗಿರುವಾಗ ನೊಟೀಸ್‌’ಗೆ ಬೆಲೆಕೊಡದೇ ಕ್ಲಿನಿಕ್ ತೆರೆಯದೇ ಇದ್ದಲ್ಲಿ ಅಂತಹ ವೈದ್ಯರ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ಎಚ್ಚರಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಸೋಮವಾರ ಹಿರೇಕೆರೂರು ನಗರ,‌ ರಾಣೆಬೆನ್ನೂರು ,‌ ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆ , ಹಾವೇರಿ ಎಪಿಎಂಸಿ ಸೇರಿದಂತೆ ಹಲವೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೊರೊನಾ ಬಗ್ಗೆ ಜನತೆಗೆ ಜಾಗೃತಿ ಮೂಡಿಸಿದ ಸಚಿವರು ಹಾವೇರಿ ನಗರಸಭಾ ಕಾರ್ಯಾಲಯದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವ ಬಿ.ಸಿ.ಪಾಟೀಲ್, ಕೊರೊನಾ‌ ಆತಂಕದ ಸಂದರ್ಭದಲ್ಲಿ ಮೆಡಿಕಲ್ ಶಾಪ್‌, ಕ್ಲಿನಿಕ್ ಆಸ್ಪತ್ರೆಗಳು ಜನರಿಗೆ ಲಭ್ಯವಿರಬೇಕು. ಒಂದು ವೇಳೆ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಅಂತಹಾ ವೈದ್ಯರ ಹಾಗೂ ಆಸ್ಪತ್ರೆ-ಕ್ಲಿಕ್’ಗಳ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ತಿಳಿಸಿದರು.

Related posts