ಪ್ರೀತಿ ಪಾಶಕ್ಕೆ ಬಿದ್ದ ಪುತ್ರಿ, ರೊಚ್ಚಿಗೆದ್ದ ತಂದೆ: ಮಗಳ ಕತ್ತು ಸೀಳಿ ಕೊಂದ

ತನ್ನ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿರುವ ವಿಷಯ ತಿಳಿದು ಅಕ್ರೋಶಗೊಂಡ ತಂದೆ, ಆಕೆಯ ಕತ್ತು ಸೀಳಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ಕವನ (20) ತಂದೆಯಿಂದಲೇ ಹತ್ಯೆಯಾಗಿದ್ದಾಳೆ, ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts