ದೊಡ್ಡಬಳ್ಳಾಪುರ: ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸತತ ಆರು ವರ್ಷಗಳಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ನಾರಾಯಣಸ್ವಾಮಿ ಅವರಿಗೆ ಗ್ರಾಮ ಪಂಚಾಯತಿ ಸಿಬ್ಬಂದಿ ಮತ್ತು ಅಧ್ಯಕ್ಷ, ಉಪಾಧ್ಯಕ್ಷ ಸದಸ್ಯರಿಂದ ಅದ್ಧೂರಿಯಾಗಿ ಬಿಳ್ಕೋಡಿಗೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಪಂ ಅಧ್ಯಕ್ಷ ದೊಡ್ಡ ನಂಜುಂಡಪ್ಪ, ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ, ನಿವೃತ್ತಿ ಸಾಮಾನ್ಯ ಪ್ರಕ್ರಿಯೆ. ಆದರೆ ನಿಷ್ಠೆ, ಪ್ರಾಮಾಣಿಕತೆಯಿಂದ ಸರ್ಕಾರದ ಯೋಜನೆಗಳು ಜನರಿತೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. ಪಿಡಿಓ ನಾರಾಯಣಸ್ವಾಮಿ ಕೂಡ ಅತ್ಯಂತ ಶ್ರದ್ದೆಯಿಂದ ಸತತ ಆರು ವರ್ಷಗಳಿಂದ ದರ್ಗಾಜೋಗಿಹಳ್ಳಿ ಗ್ರಾಪಂ ಅಭಿವೃದ್ಧಿ ಶ್ರಮಿಸಿದ್ದಾರೆ. ಜಲಜೀವನ್ ಮಿಷನ್ ಸೇರಿದಂತೆ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಕೆಲಸ ಮಾಡಿದ್ದಾರೆ ಎಂದರು.
ನಿವೃತ್ತ ಪಿಡಿಓ ನಾರಾಯಣಸ್ವಾಮಿ ಮಾತನಾಡಿ ನನ್ನ ಅಧಿಕಾರವಧಿಯಲ್ಲಿ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ಪ್ರತಿಯೊಬ್ಬರು ಸಹಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಕೆ.ನಾಗೇಶ್ ಅವರು, ಪಿಡಿಓ ನಾರಾಯಣಸ್ವಾಮಿಗೆ ಬೆಳ್ಳಿಗದೆ ನೀಡಿ ಅಭಿನಂದಿಸಿ, ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು. ದರ್ಗಾಜೋಗಿಹಳ್ಳಿ ಗ್ರಾ.ಪಂ ನಲ್ಲಿ ನಿವೃತ್ತ ಪಿಡಿಓ ನಾರಾಯಣಸ್ವಾಮಿಗೆ ಗ್ರಾ.ಪಂ ವತಿಯಿಂದ ಸನ್ಮಾನಿಸಿ ಬಿಳ್ಕೋಟ್ಟರು. ಅಧ್ಯಕ್ಷ ದೊಡ್ಡ ನಂಜುಂಡಪ್ಪ, ಉಪಾಧ್ಯಕ್ಷೆ ರಜಿಯಾ, ಮಾಜಿ ಅಧ್ಯಕ್ಷ ಕೆ.ನಾಗೇಶ್, ಸದಸ್ಯ ಜಿ.ವೈ ಮಲ್ಲಪ್ಪ, ಮುಖಂಡರಾದ ಅಪ್ಪಿ ವೆಂಕಟೇಶ್, ಮಾಜಿ ಉಪಾಧ್ಯಕ್ಷ ಡಿಎನ್ ತಿಮ್ಮರಾಜು, ಸದಸ್ಯರು ಮತ್ತಿತರರು ಇದ್ದರು.