ಪ್ರಾಪರ್ಟಿ ಪರೇಡ್: ನಾನಾಲ್ವರು ಮೊಬೈಲ್ ಕಳ್ಳರಿಂದ 1037 ಮೊಬೈಲ್ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಸಾರ್ವಜನಿಕರನ್ನು ಯಾಮಾರಿಸಿ ಕಳ್ಳರು ತಮ್ಮ ಕೈಚಳಕದಿಂದ ವಿವಿದೆಢೆಗಳಲ್ಲಿ ಹಲವರಿಂದ ಬೆಲೆ ಬಾಳುವ ಮೊಬೈಲ್ ಗಳನ್ನ ಕಳ್ಳತನ ಮಾಡಿರುವ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಸಾವಿರಕ್ಕೂ ಹೆಚ್ಚು ಮೊಬೈಲ್’ಗಳನ್ನು ವಶಪಡಿಸಿಕೊಂಡಿದ್ದಾರೆ.


ಮೊಬೈಲ್ ಗಳನ್ನು ಕಳೆದುಕೊಂಡ ಬಗ್ಗೆ ದೂರು ದಾಖಲಿಸಿಕೊಂಡ ಬನ್ನೇರುಘಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಕ್ರೈಂ ಸಿಬ್ಬಂದಿಯು‌ ನಾಲ್ಕು ಜನ ಮೊಬೈಲ್ ಕಳ್ಳರನ್ನು ದಸ್ತಗಿರಿ ಮಾಡಿ ಅವರಿಂದ 1037 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಮೊಬೈಲ್ ಫೋನ್’ಗಳನ್ನು ದೊಡ್ಡಬಳ್ಳಾಪುರದಲ್ಲಿನ ಪ್ರಾಪರ್ಟಿ ಪರೇಡ್’ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರು ಪರಿಶೀಲಿಸಿದರು.

ನಾಲ್ವರು ಮೊಬೈಲ್ ಕಳ್ಳರನ್ನು ಬಂಧಿಸಿ ಅವರಿಂದ 1037 ಮೊಬೈಲ್ ಗಳನ್ನು ವಶಪಡಿಸಿಕೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ಸಿಬ್ಬಂದಿಯ ಕಾರ್ಯವನ್ನು ಗುರುತಿಸಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು. ಈ ವೇಳೆ ಅಪರ ಪೊಲೀಸ್ ಅಧೀಕ್ಷಕ, ಆನೇಕಲ್ ವಿಭಾಗದ ಡಿಸಿಪಿ, ಬನ್ನೇರುಘಟ್ಟ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related posts