ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗುರುವಾರ ಚುನಾವಣೆ ನಡೆಯಿತು. ಒಟ್ಟು 11 ನಿರ್ದೆಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11 ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ನಿರ್ದೇಶಕರಾಗಿ ಲಕ್ಷ್ಮಮ್ಮ, ಮೀನಾಕ್ಷಿ, ಶ್ರೀನಿವಾಸ, ಲಿಂಗಮೂರ್ತಿ, ನಂಜೇಗೌಡ, ಹನುಮಂತಪ್ಪ, ಶಿವಕುಮಾರ್, ಶಶಿಕುಮಾರ್, ಶಂಕರಪ್ಪ, ಸುರೇಶ್, ಆನಂದ್ ಅವರುಗಳು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಸಹಕಾರಿ ಇಲಾಖೆಯ ಮಾಧವರೆಡ್ಡಿ ಕರ್ತವ್ಯ ನಿರ್ವಹಿಸಿದರು. ನೂತನ ನಿರ್ದೇಶಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದ ಮಾಧವರೆಡ್ಡಿ ಸೊಣ್ಣಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿನ ಸದಸ್ಯರು ಕರ್ನಾಟಕ ಹಾಲು ಮಹಾಮಂಡಳ ಹಾಗೂ ಬೆಂಗಳೂರು ಹಾಲು ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಒಕ್ಕೂಟದಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ರಾಸುಗಳ ವಿಮಾ ಸೌಲಭ್ಯ, ಬಮೂಲ್ ವಿಮಾ ಸೌಲಭ್ಯ, ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನಗಳು, ಬೆಂಗಳೂರು ಹಾಲು ಒಕ್ಕೂಟದಿಂದ ಅನುದಾನಗಳು, ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ರಾಸುಗಳಿಗೆ ಕಾಲ ಕಾಲಕ್ಕೆ ಲಸಿಕೆಯ ಸೌಲಭ್ಯಗಳು, ಬರಡು ರಾಸುಗಳಿಗಾಗಿ ವಿಶೇಷ ಶಿಬಿರಗಳು, ನೂತನ ಕಟ್ಟಡಗಳಿಗೆ ಪೀಠೋಪಕರಣಗಳು, ಪಶು ಆಹಾರ, ಖನಿಜ ಮಿಶ್ರಣ, ಗೋಧರ್ ಶಕ್ತಿ, ಸಂಘದ ಒಳಿತಿಗಾಗಿ ಸಾಲ ಸೌಲಭ್ಯ, ವಾರ ಪೂರ್ತಿ ವೈದ್ಯರ ಲಭ್ಯತೆ, ಮತ್ತಿತರ ಸೇವೆ, ಸೌಲಭ್ಯಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. Doddaballapur sonnappanahalli MPCS election – Director s
ದೊಡ್ಡಬಳ್ಳಾಪುರದ ಸೊಣ್ಣಪ್ಪನಹಳ್ಳಿ ಎಂಪಿಸಿಎಸ್ ಸಂಘಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರನ್ನು ಗ್ರಾಮಸ್ಥರು ಅಭಿನಂದಿಸಿದರು. ಈ ವೇಳೆ ಕೊನಘಟ್ಟ ಗ್ರಾ.ಪಂ ಅಧ್ಯಕ್ಷೆ ಮಂಗಳಾ ಮಂಜುನಾಥ, ಸದಸ್ಯ ಪ್ರಭಾಕರ್, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕ ಉಪಾಧ್ಯಕ್ಷ ರಮೇಶ್ ಎಸ್.ಯು, ಮೋಹನ್, ಹನುಮಂತೇಗೌಡ, ನಾಗರಾಜು, ರಾಮಣ್ಣ, ಎಸ್ಡಿಎಂಸಿ ಅಧ್ಯಕ್ಷ ಮಹೇಶ್ ಮತ್ತಿತ್ತರರು ಇದ್ದರು.