ಯತೀಂದ್ರಗೆ ಸಾಂವಿಧಾನಿಕ ಹುದ್ದೆ; ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌ಯೇ ಸಿದ್ದರಾಮಯ್ಯರ ಪುತ್ರ ವ್ಯಾಮೋಹ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‍ಪುತ್ರ, ಡಾ.ಯತೀಂದ್ರ ವವರಿಗೆ ಸಾಂವಿಧಾನಿಕ ಹುದ್ದೆ ನೀಡುವ ಮೂಲಕ ರಾಜಕೀಯ ಎದುರಾಳಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ರಾಜ್ಯ ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಈ ನೇಮಕ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ವ್ಯಾಮೋಹವು ಧೃತರಾಷ್ಟ್ರನನ್ನೇ ಮೀರಿಸುವಂತಿದೆ‌ ಎಂದು ಪ್ರತಿಕ್ರಿಯಿಸಿದೆ.

ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಯತೀಂದ್ರರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ! ಎಂದು ಟ್ವೀಟ್ ಮಾಡಿರುವ ಬಿಜೆಪಿ, ‘ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು!’ ಎಂದು ವ್ಯಂಗ್ಯವಾಡಿದೆ.

Uncategorized

Related posts