ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ.
ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸಾವಿರಾರು ಟನ್ ಕಬ್ಬಿಣದ ಅದಿರನ್ನು ಬಂದರಿನಿಂದ ಕಳವು ಮಾಡಿ ಅಕ್ರಮವಾಗಿ ಸಾಗಿಸಲಾಗಿತ್ತು ಎಂಬುದು ಆರೋಪ ಬಗ್ಗೆ ಇಡಿ ಕೂಡಾ ಇಸಿಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ವಿಚಾರಣೆಗೆ ಹಾಜರಾಗುವಂತೆ ಸೈಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಮಂಗಳವಾರ ಶಾಂತಿನಗರ ಕಚೇರಿಗೆ ಹಾಜರಾದ ಸೈಲ್ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.