ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಬಂಧನಕ್ಕೊಳಗಾಗಿದ್ದಾರೆ. ಜಾರಿ ನಿರ್ದೇಶನಾಲಯ ಬುಧವಾರ ಬೆಳಿಗ್ಗೆ ಸಂಜಯ್ ಸಿಂಗ್ ಅವರನ್ನು ಬಂಧಿಸಿದ್ದು, ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಮಹತ್ವದ ಮಾಹಿತಿಯನ್ನು ಕಲೆಹಾಕಿದೆ.
ರಾಜ್ಯಸಭಾ ಸದಸ್ಯರಾಗಿರುವ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇವರು ಆಮ್ ಆದ್ಮಿ ಪಕ್ಷದ ಎರಡನೇ ನಾಯಕರಾಗಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ದೆಹಲಿಡಿಸಿಎಂ ಮನೀಶ್ ಸಿಸೋಡಿಯಾ ಅವರು ಬಂಧನಕ್ಕೊಳಗಾಗಿದ್ದರು.