ಎರ್ನಾಕುಲಂ: ಕ್ರೈಸ್ತ ಧಾರ್ಮಿಕ ಕಾರ್ಯಕ್ರಮ ವೇಳೆ ಸಂಭವಿಸಿಧದ ಸರಣಿ ಬಾಂಬ್ ಸ್ಫೋಟದ ಗಾಯಾಳುಗಳ ಪೈಕಿ ಮತ್ತೊಬ್ಬರು ಮೃತಪಟ್ಟಿದ್ದು, ಘಟನೆಯಲ್ಲಿ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಅಕ್ಟೋಬರ್ 29 ರಂದು ಧಾರ್ಮಿಕ ಸಭೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅನೇಕರು ಆಸ್ಪತ್ರೆಗಳಿಗೆ ದಾಖಲಾಗಿದ್ದರು. ಈ ಪೈಕಿ ಮತ್ತೊಬ್ಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.