ಎತ್ತಿನ ಹೊಳೆ ಕಾಮಗಾರಿ ಶೀಘ್ರ ಪೂರ್ಣ; ಮಾರ್ಚ್ ವೇಳೆಗೆ ಪ್ರಾಯೋಗಿಕವಾಗಿ ನೀರು

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎತ್ತಿನ ಹೊಳೆ ಕಾಮಗಾರಿ ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈ ಕುರಿತಂತೆ ಬಯಲು ಸೀಮೆ ಜನರಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಖುಷಿ ಸುದ್ದಿಯನ್ನು ನೀಡಿದ್ದಾರೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ಕೆಲಸ ಕಾರ್ಯ ತ್ವರಿತವಾಗಿ ನಡೆಸಲಾಗುತ್ತಿದೆ ಎಂದರು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ , ಕುಂಬರಡಿ, ಕಾಡುಮನೆ ,ಹೆಬ್ಬನಳ್ಳಿ ಗಳಲ್ಲಿ ಯೋಜನಾ ಸ್ಥಳಗಳಿಗೆ ಭೇಟಿ‌ ನೀಡಿದರು. ಬಯಲು ಸೀಮೆಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ‌ ಸಂದರ್ಭದಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದ‌ ಸಚಿವ ರಮೇಶ್ ಜಾರಕಿಹೊಳಿ, 2021 ರ ಮಾರ್ಚ್ ವೇಳೆಗೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಿ 37 ಕಿ ಮೀ ವರಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದರು. ಕೋವಿಡ್ 19 ಹಿನ್ನಲೆಯಲ್ಲಿ ಕಾಮಗಾರಿ ವಿಳಂವಾಗಿದೆ. ಇನ್ನುಮುಂದೆ ಕ್ಷಿಪ್ರವಾಗಿ ಕೆಲಸ ನಡೆಸಲಾಗುವುದು. ಆದಷ್ಟು ಬೇಗ ಬಯಲು ಸೀಮೆಗೆ ನೀರು ಹರಿಸಬೇಕೆಂಬುದು ಸರ್ಕಾರದ ಗುರಿಯಾಗಿದೆ ಎಂದವರು ತಿಳಿಸಿದರು.

ಯೋಜನೆಯಿಂದ‌ ಭಾದಿತವಾಗಿರುವ ಸಕಲೇಶಪುರ ಮತ್ತು ಆಲೂರು ತಾಲ್ಲೂಕುಗಳಲ್ಲಿ ಈಗಾಗಲೇ ಮೂಲಭೂತ ಸೌಕರ್ಯ ಅಭಿವೃದ್ಧಿ ಗೆ ಗಮನ ಹರಿಸಲಾಗಿದ್ದು ರಸ್ತೆ ಕಾಮಗಾರಿಗಳ‌ನ್ನು ಕೈ ಗೊಳ್ಳಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಇದನ್ನೂ ಓದಿ.. ಶ್ರಮಿಕ ವರ್ಗಕ್ಕೆ ಪ್ಯಾಕೇಜ್; ಸಿಎಂಗೆ ಸಚಿವ ಸಿ.ಟಿ.ರವಿ ಅಭಿನಂದನೆ; ಇನ್ನಷ್ಟು ಮಂದಿಗೆ ನೆರವು ನೀಡಲು ಮನವಿ 

 

Related posts