ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ..

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಸಹಿತ ಅನೇಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ನಾಯಕರು ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಚಂದ್ರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅಕ್ಕಪ್ಪ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts