ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ.
ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಾರ 2018ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕಿಂತ ಈ ಬಾರಿ ಬಿಜೆಪಿ ಚೇತರಿಕೆ ಕಂಡಿದೆ. ಮಧ್ಯಪ್ರದೇಶ, ಛತ್ತೀಸ್ ಘಡದಲ್ಲಿ ಹಿಂದಿಗಿಂತ ಹೆಚ್ಚು ಸೀಟುಗಳನ್ನು ಗೆಲ್ಲುವ ಸಾಧ್ಯತೆಗಳು ವ್ಯಕ್ತವಾಗಿವೆ ಎಂದು ವಿಶ್ಲೇಷಕರು ಬಣ್ಣಿಸಿದ್ದಾರೆ.
ಇನ್ನೊಂದೆಡೆ, ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಅಭಿಯಾನ ಆರಂಭಿಸಿದೆ. ಅದರಂತೆ ಈ ಬಾರಿ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ‘ಕೈ’ ಧುರೀಣರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳು ರಾಜಸ್ಥಾನದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಸುಳಿವು ನೀಡಿದೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ಗೆಲ್ಲುವ ಸೂಚನೆ ನೀಡಿದೆ. ರಾಜಸ್ತಾನ ವಿಧಾನಸಭೆಯ ಒಟ್ಟು 199 ಸ್ಥಾನಗಳ ಪೈಕಿ ಬಿಜೆಪಿಗೆ ಸರಳ ಬಹುಮತ ಸಿಗುವ ಸಾಧ್ಯತೆಗಳ ಬಗ್ಗೆ ವಿಶ್ಲೇಷಿಸಿದೆ.
ಜನ್‌ಕೀ ಬಾತ್‌ಸಮೀಕ್ಷೆ ಪ್ರಕಾರ ಬಿಜೆಪಿ 100-122 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 62-85 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಟೈಮ್ಸ್ ನೌ ಸಮೀಕ್ಷೆ ಪ್ರಕಾರ ಬಿಜೆಪಿ 108-128 ಸ್ಥಾನಗಳನ್ನು ಗೆಲ್ಲಲಿದೆ, ಕಾಂಗ್ರೆಸ್ 56-72 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಪೂಲ್‌ಸ್ಟಾರ್ಟ್ ಸಮೀಕ್ಷೆ ಪ್ರಕಾರ ಬಿಜೆಪಿ 100-110 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 90-100 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಬಿಜೆಪಿ 80-100 ನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 86-106, ಬಿಎಸ್‌ಪಿ 1-2 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇದೇ ವೇಳೆ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ. ಒಟ್ಟು 230 ಸದಸ್ಯಬಲದ ಮಧ್ಯಪ್ರದೇಶದಲ್ಲಿ ವಿಧಾನಸಭೆಯಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಭರ್ಜರಿ ಪೈಪೋಟಿ ನೀಡಿದ್ದರೂ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಸುಳಿವು ನೀಡಿದೆ.
ಜನ್‌ಕೀಬಾತ್ ಸಮೀಕ್ಷೆ ಪ್ರಕಾರ ಬಿಜೆಪಿ 100 -123 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 102-125 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ರಿಪಬ್ಲಿಕ್ ಟಿವಿ ಸಮೀಕ್ಷೆ ಪ್ರಕಾರ ಬಿಜೆಪಿ 118 -130 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 97-107 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಪೂಲ್‌ಸ್ಟಾರ್ಟ್ ಸಮೀಕ್ಷೆ ಪ್ರಕಾರ ಬಿಜೆಪಿ 106-116 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 111-121 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಅತ್ತ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್‌ಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಮತದಾನೋತ್ತರ ಸಮೀಕ್ಷೆ ತಿಳಿಸಿದೆ. 199 ಸದಸ್ಯಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ.
ಜನ್‌ಕೀಬಾತ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 48-64 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್ 40-55, ಬಿಜಪಿ 7-13 ಸ್ಥಾನಗಳನ್ನು ಗೆಲ್ಲಲಿದೆ.
ಪೋಲ್ ಸ್ಟ್ರಾಟಜಿ ಗ್ರೂಪ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 49-54 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್ 53-58, ಬಿಜೆಪಿ 4-6 ಸ್ಥಾನಗಳನ್ನು ಗೆಲ್ಲಲಿದೆ.
ರಿಪಬ್ಲಿಕ್ ಟಿವಿ-ಸಿ ವೋಟರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 47-59 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್ 48-60, ಬಿಜೆಪಿ 5 ಸ್ಥಾನಗಳನ್ನು ಗೆಲ್ಲಲಿದೆ.
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಮಾಧ್ಯಮಗಳ ಸಮೀಕ್ಷೆ ಹೇಳಿವೆ. 90 ಸದಸ್ಯಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗಲಿದೆ ಎಂದು ಸಮೀಕ್ಷೆಗಳು ಸುಳಿವು ನೀಡಿದೆ.
ಎಬಿಪಿ ನ್ಯೂಸ್ ಸಮೀಕ್ಷೆ ಪ್ರಕಾರ ಬಿಜೆಪಿ 36-48 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 41-53 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ದೈನಿಕ್ ಭಾಸ್ಕರ್ ಸಮೀಕ್ಷೆ ಪ್ರಕಾರ ಬಿಜೆಪಿ 35-45 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 46-55 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಬಿಜೆಪಿ 36-46 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 40-50 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ ಬಿಜೆಪಿ 30-40 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 46-56 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳೇ ಮೇಲುಗೈ ಸಾಧಿಸಲಿದೆ ಎಂಬ ಸುಳಿವು ವ್ಯಕ್ತವಾಗಿದೆ. ಒಟ್ಟು 40 ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ. ಝಡ್‌ಪಿಎಂ ಮತ್ತು ಎಂಎನ್‌ಎಫ್ ನಡುವೆ ಭಾರೀ ಪೈಪೋಟಿ ನಡೆದಿದೆ. ರಾಷ್ಟ್ರೀಯ ಪಕ್ಷಗಳಿಗೆ ಜನ ಮನ್ನಣೆ ನೀಡಿಲ್ಲ ಎಂಬುದು ಸಮೀಕ್ಷೆಯ ಫಲಿತಾಂಶ.
ಜನ್‌ಕಿ ಬಾತ್ ಸಮೀಕ್ಷೆ ಪ್ರಕಾರ ಎಂಎನ್‌ಎಫ್ 10-14 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ 05-09 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಬಿಜೆಪಿ 00-02 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಝಡ್‌ಪಿಎಂ 15-25 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಸಿ-ವೋಟರ್ ಸಮೀಕ್ಷೆ ಪ್ರಕಾರ ಎಂಎನ್‌ಎಫ್ 15-21 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ 02-08 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಬಿಜೆಪಿ 0-5 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಝಡ್‌ಪಿಎಂ 12-18 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ ಎಂಎನ್‌ಎಫ್ 14-18 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ 08-10 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಬಿಜೆಪಿ 0-2, ಝಡ್‌ಪಿಎಂ 12-16 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಪೀಪಲ್ಸ್ ಪಲ್ಸ್ ಸಮೀಕ್ಷೆ ಪ್ರಕಾರ ಎಂಎನ್‌ಎಫ್ 16-20 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಕಾಂಗ್ರೆಸ್ 08-10 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಬಿಜೆಪಿ 0-2 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಝಡ್‌ಪಿಎಂ 12-17 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ.
ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಎಂಎನ್‌ಎಫ್ 3-7 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಕಾಂಗ್ರೆಸ್ 0-4 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಬಿಜೆಪಿ 0-2 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ. ಝಡ್‌ಪಿಎಂ 28-35 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.