EXIT POLL: ತೆಲಂಗಾಣದಲ್ಲಿ ಕಾಂಗ್ರೆಸ್ ‘ಕೈ’ಗೆ ಅಧಿಕಾರ ಸಾಧ್ಯತೆ

ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ.

ಚುನಾವಣೋತ್ತರ ಸಮೀಕ್ಷೆಗಳು ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ. 199 ಸದಸ್ಯಬಲದ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್‌ಗೆ ಕಾಂಗ್ರೆಸ್‌ ತೀವ್ರ ಪೈಪೋಟಿ ನೀಡಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಮತದಾನೋತ್ತರ ಸಮೀಕ್ಷೆ ತಿಳಿಸಿದೆ.

ಜನ್‌ಕೀಬಾತ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 48-64 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್‌ 40-55, ಬಿಜಪಿ 7-13 ಸ್ಥಾನಗಳನ್ನು ಗೆಲ್ಲಲಿದೆ.

ಪೋಲ್‌ ಸ್ಟ್ರಾಟಜಿ ಗ್ರೂಪ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 49-54 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್‌ 53-58, ಬಿಜೆಪಿ 4-6 ಸ್ಥಾನಗಳನ್ನು ಗೆಲ್ಲಲಿದೆ.

ರಿಪಬ್ಲಿಕ್‌ ಟಿವಿ-ಸಿ ವೋಟರ್‌ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ 47-59 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್‌ 48-60, ಬಿಜೆಪಿ 5 ಸ್ಥಾನಗಳನ್ನು ಗೆಲ್ಲಲಿದೆ.

Related posts