ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ.
ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರುವ ಸಾಧ್ಯತೆಯಿದೆ ಎಂದು ಹೇಳಿದೆ. ಒಟ್ಟು 230 ಸದಸ್ಯಬಲದ ಮಧ್ಯಪ್ರದೇಶದಲ್ಲಿ ವಿಧಾನಸಭೆಯಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಭರ್ಜರಿ ಪೈಪೋಟಿ ನೀಡಿದ್ದರೂ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಸುಳಿವು ನೀಡಿದೆ.