ಚಾಮರಾಜನಗರ: ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಬಳಿ ಕಾಡಾನೆ ದಾಳಿಗೆ ಚೆನ್ನ ಮಾದಯ್ಯ(60) ಮೃತಪಟ್ಟಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಾರ್ಟಳ್ಳಿ ಗ್ರಾಮ ಪಂಚಾಯಿತಿ ತಾಂಡ ಮೇಡು ಬೋರೆ ಗ್ರಾಮದ ನಿವಾಸಿ ಬೇಡಗಂಪಣ ಜನಾಂಗದ ಸತ್ತಿಗೆ ಮಾದಯ್ಯರವರ ಪುತ್ರ ಚೆನ್ನ ಮಾದಯ್ಯ ಅನ್ಯ ಕಾರ್ಯ ನಿಮಿತ್ತ ತೋಕೆರೆ ಗ್ರಾಮಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹಾಗೂ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಾಪುರ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.