ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರಸ್ವರೂಪ ಪಡೆಯುತ್ತಿದೆ. ಇದೇ ವೇಳೆ, ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ. ಇಲ್ಲವಾದರೆ, ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಕೇಂದ್ರ ಸರ್ಕಾರಕ್ಕೆ ಅವರು ಸಲಹೆ ನೀಡಿದ್ದಾರೆ. ರೈತರ ಸಮಸ್ಯೆ ಆಲಿಸಬೇಕಿದ್ದರೆ ಬುರಾಡಿ ಉದ್ಯಾನಕ್ಕೆ ಬರಬೇಕು ಎಂದು ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಇದನ್ನು ರೈತರು ಒಪ್ಪಿಲ್ಲ. ಇದು ತಮಗೆ ಒಡ್ಡಿರುವ ಷರತ್ತು ಎಂದು ರೈತರು ಭಾವಿಸಿದ್ದಾರೆ. ಅದ್ದರಿಂದ ಈ ಷರತ್ತು ಹಿಂದಕ್ಕೆ ಪಡೆಯುವುದೇ ಸೂಕ್ತ. ರೈತರು ಇರುವಲ್ಲಿಯೇ, ಅವರು ಇಚ್ಛಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸಿ ಎಂಬುದು ನನ್ನ ಸಲಹೆ ಎಂದವರು ಹೇಳಿದ್ದಾರೆ.
ಹಲವು ದಿನಗಳಿಂದ ರೈತರು ಸಿಂಗು ಗಡಿಯಲ್ಲೇ ಧರಣಿ ಕುಳಿತಿದ್ದಾರೆ. ಇದು ಚಳಿಗಾಲ. ದೆಹಲಿ ಚಳಿ ಯಾರಿಗಾದರೂ ಮೈ ನಡುಗಿಸುತ್ತದೆ. ಕೋವಿಡ್ ಕಾಲದಲ್ಲಿ ರೈತರನ್ನು ಹಾಗೆ ಅಲ್ಲಿ ಬಿಡುವುದು ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ. ಅಲ್ಲಿರುವ ಯಾರಿಗಾದರೂ ಅಪಾಯವಾದರೆ ಅದು ಕೇಂದ್ರ ಸರ್ಕಾರದ ಬಾಧ್ಯತೆಯಾಗುತ್ತದೆ. ಹೀಗಾಗಿ ಕೂಡಲೇ ಮನವಿ ಆಲಿಸುವುದು ಸಮಂಜಸ ಎಂದು ಹೆಚ್ಡಿಕೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ. ಇಲ್ಲವಾದರೆ, ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ. 1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 30, 2020