ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧದ ಸಂಬಂಧಿಸಿದಂತೆ ಆರ್.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ಪ್ರಕರಣ ಬಗ್ಗೆ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಎನ್ನಲಾಗಿದೆ.
ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯ್ ಕುಮರ್, ಸೆಕ್ಯೂರಿಟಿ ಅಭಿಷೇಕ್ ಮತ್ತು ಆಪ್ತ ವಸಂತ್ ಕುಮಾರ್ ಅವರನ್ನು ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.