ಬಾಗ್ದಾದ್‌ನಲ್ಲಿ ಭೀಕರ ಅವಘಡ; ಮದುವೆ ಮನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಸಜೀವ ದಹನ

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ಬಳಿ ಮದುವೆ ಸಭಾಂಗಣದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿ 100ಕ್ಕೂ ಹೆಛಚು ಮಂದಿ ಸಜೀವ ದಹನಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್‌ನಲ್ಲಿ ಅಗ್ನಿ ಸ್ಪರ್ಶವಾಗಿ ಬೆಂಕಿ ಸಭಾಂಗಣವನ್ನು ಆವರಿಸಿ ಈ ಭೀಕರ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಎಂಬಲ್ಲಿ, ಕ್ರಿಶ್ಚಿಯನ್ ಸಮುದಾಯದ ಪ್ರಾಬಲ್ಯ ಇರುವ ಪ್ರದೇಶದಲ್ಲಿರುವ ಮದುವೆ ಸಭಾಂಗಣದಲ್ಲಿ ಮಂಗಳವಾರ ಈ ಅನಾಹುತ ಘಟಿಸಿದ್ದು, 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

Related posts