ಬಹುತೇಕ ರಾಜ್ಯಗಳಲ್ಲಿ ಈ ಬಾರಿ ಪಟಾಕಿ ರಹಿತ ದೀಪಾವಳಿಗೆ ಆದ್ಯತೆ ನೀಡಲಾಗಿದೆ. ಕರ್ನಾಟಕ ಸರ್ಕಾರ ಪಟಾಕಿ ನಿಷೇಧ ಜಾರಿ ಮಾಡಿದ್ದು ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಿದೆ.
ರಾಜ್ಯ ಸರ್ಕಾರ ಪಟಾಕಿ ನಿಷೇಧ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಬಗ್ಗೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.
ರಾಜಸ್ಥಾನದಲ್ಲಿ ಭಾರೀ ಫೈನ್
ರಾಜಸ್ಥಾನದಲ್ಲೂ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಜನರು ಪಟಾಕಿ ಬಳಸದೆ ದೀಪಾವಳಿ ಆಚರಿಸುವಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧವನ್ನು ಉಲ್ಲಂಘಿಸುವವರ ವಿರುದ್ಧ ಕಡ್ಡಾಯವಾಗಿ ದಂಡ ವಿಧಿಸಲು ಅವರು ಪೊಲೀಸರಿಗೆ ಸೂಚಿಸಿದ್ದಾರೆ.
ಯಾವುದೇ ಅಂಗಡಿ ಮಾಲೀಕರು ಪಟಾಕಿ ಮಾರಾಟ ಮಾಡುವುದು ಕಂಡುಬಂದಲ್ಲಿ 10 ಸಾವಿರ, ಯಾರಾದರೂ ಪಟಾಕಿ ಬಳಸುವುದು ಕಂಡುಬಂದಲ್ಲಿ 2 ಸಾವಿರ ದಂಡವನ್ನು ವಿಧಿಸಲು ಸರ್ಕಾರ ಸೂಚನೆ ನೀಡಿದೆ.