ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹಿರಂಗಗೊಂಡಿದ್ದು, ಈ ಮಹಾಸಮರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ, ತೆಲಂಗಾಣ, ಮಿಜೋರಾಂ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಭದ್ರವಾಗಿವೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬಿಜೆಪಿ ಪಾರುಪಥ್ಯ ಮೆರೆದರೆ, ಛತ್ತೀಸ್‌ಗಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಹೋರಾಟ ನೀಡಿದೆ. ತೆಲಂಗಾಣ ಕಾಂಗ್ರೆಸ್ ಪಾಲಾದರೆ ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷವೇ ಕಿಂಗ್.
ಈ ಮಿನಿ ಮಹಾಸಮರವು ಮು.ಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ. ಹಾಗಾಗಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಭವಿಷ್ಯ ಈ ಫಲಿತಾಂಶದಲ್ಲಿ ಅಡಗಿದೆ ಎಂದು ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಈ ನಡುವೆ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ರಾಜ್ಯಗಳಲ್ಲಿನ ಪ್ರತೀ ಚುನಾವಣೆಗಳಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರುವುದು ಸಾಮಾನ್ಯ. ಅದೇ ರೀತಿ, ಈ ಬಾರಿ ರಾಜಸ್ಥಾನದಲ್ಲಿ ಬಿಜೆಪಿಯು ಕಾಂಗ್ರೆಸ್ ‘ಕೈ’ಯಿಂದ ಅಧಿಕಾರ ಕಿತ್ತುಕೊಂಡಿದೆ. ಆದರೆ ಮಧ್ಯಪ್ರದೇಶದಲ್ಲಿ ಕಮಲ ಪಕ್ಷ ಅಧಿಕಾರ ಕಳೆದುಕೊಳ್ಳದೆ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸಿದೆ.
👉 ಮಧ್ಯಪ್ರದೇಶ ಫಲಿತಾಂಶ
👉 ರಾಜಸ್ಥಾನ ಫಲಿತಾಂಶ
👉 ಛತ್ತೀಸ್‌ಗಡ ಫಲಿತಾಂಶ
👉 ತೆಲಂಗಾಣ ಫಲಿತಾಂಶ
👉 ಮಿಜೋರಾಂ ಫಲಿತಾಂಶ