ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ; ಗಣ್ಯರ ಶೋಕ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ವಿಧಿವಶರಾಗಿದ್ದಾರೆ. 87 ವರ್ಷ ವಯಸ್ಸಿನ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ದಾರದಹಳ್ಳಿಯಯಲ್ಲಿ ವಾಸವಿದ್ದ ಡಿ.ಬಿ.ಚಂದ್ರೇಗೌಡ ಅವರು ಅಲ್ಲಿನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಶಾಸಕರಾಗಿ ಆಯ್ಕೆಯಾಗಿದ್ದ ಡಿ.ಬಿ.ಚಂದ್ರೇಗೌಡ ಅವ್ರು ಸಚಿವರಾಗಿದ್ದರು. ಕಾನೂನು ಸಚಿವರು ಹಾಗೂ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.

Related posts