ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಚೇತನ್ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ (15) ಮೃತ ದುರ್ದೈವಿಗಳು. ತನ್ನ ಕುಟುಂಬ ಸದಸ್ಯರಿಗೆ ವಿಷ ವುಣಿಸಿ ನಂತರ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಚೇತನ್ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಅದರಲ್ಲಿ ಬರೆಯಲಾಗಿದೆ ಎನ್ನಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.