ದೊಡ್ಡಬಳ್ಳಾಪುರ: ಖ್ಯಾತ ಕ್ರಿಕೆಟಿಗ, ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್ .ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸಧ್ಯ ಪಾಕಿಸ್ತಾನ ಹಾಗೂ ಶ್ರೀಲಂಕಾ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ಮಾದರಿಯ ಏಷ್ಯಾ ಕಪ್ಗೆ ಅಂತಿಮ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದರು, ಆದರೆ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದರಿಂದ ಮೊದಲೆರಡು ಪಂದ್ಯಗಳಿಂದ ದೂರ ಸುಳಿದಿದ್ದಾರೆ.
ಶನಿವಾರ ಮಧ್ಯಾಹ್ನ 12.30 ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಭಕ್ತರು ಮುಗಿಬಿದ್ದರು.
ಈಒ ಕ್ರಿಷ್ಣಪ್ಪ,ಸಿಬ್ಬಂದಿ ನಂಜಪ್ಪ, ವೆಂಕಟೇಶ್ ಅವರು ಪೂಜೆ, ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದರು.