ಮನ್ಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತಂದಿರುವ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮನ್ಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಗೋಹತ್ಯೆ ನಿಷೇಧ ಕಾನೂನು ದೇಶದಲ್ಲಿ ಈಗಾಗಲೇ ಜಾರಿಯಲ್ಲಿತ್ತು. ಅದನ್ನು ಬದಲಿಸುವ ಅಗತ್ಯ ಇರಲಿಲ್ಲ. ರಾಜಕಾರಣಕ್ಕಾಗಿ ಇದನ್ನು ಹೊಸದಾಗಿ ತರುತ್ತಿದ್ದಾರೆ ಎಂದು ದೂರಿದರು.
ನಾವೆಲ್ಲ ಗೋಮಾತೆಗೆ ಗೌರವ ನೀಡುತ್ತೇವೆ. ಅದು ನಮ್ಮ ಸಂಸ್ಕೃತಿ. ಆದರೆ ಆಡಳಿತ ಪಕ್ಷದವರು ರಾಜಕಾರಣಕ್ಕಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎದು ಡಿಕೆಶಿ ಆರೋಪಿಸಿದರು.
ಗೋ ಸಂರಕ್ಷಣೆ ಮಾಡುವುದಾದರೆ, ಮೊದಲು ಗೋಮಾಂಸ ರಫ್ತು ನಿಷೇಧಿಸಿ. ರೈತರಿಗೆ ಪ್ರತಿ ಹಸು ಸಾಕಲು 25 ಸಾವಿರದಿಂದ 50 ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಇದು ಒಂದು ವರ್ಗದ ವಿಚಾರವಲ್ಲ. ರೈತರು ಎಲ್ಲ ಸಮುದಾಯದವರು. ಎಲ್ಲ ವರ್ಗದವರೂ ಹಸು ಸಾಕುತ್ತಾರೆ. ಹೀಗಾಗಿ ಎಲ್ಲರಿಗೂ ಸರ್ಕಾರ ಪರಿಹಾರ ನೀಡಬೇಕು. ಇಲ್ಲವಾದರೆ ಆ ಹಸುವಿಗೆ ಇರುವ ಬೆಲೆಯನ್ನು ಕೊಟ್ಟು ಅದನ್ನು ಕರೆದುಕೊಂಡು ಹೋಗಿ ಅವರ ಮನೆಯಲ್ಲಿ ಕಟ್ಟಿಕೊಳ್ಳಲಿ ಎಂದರು.