ಸರ್ಕಾರಿ ನೌಕರರ ರಜೆ ಗೊಂದಲಕ್ಕೆ ಸರ್ಕಾರ ತೆರೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ರಜೆ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. ಮಹತ್ವದ ತೀರ್ಮಾನವೊಂದರಲ್ಲಿ 4ನೇ ಶನಿವಾರದ ರಜೆ ಅನ್ವಯವಾಗದ ಸರ್ಕಾರಿ ನೌಕರರಿಗೆ 15 ಸಾಂದರ್ಭಿಕ ರಜೆ ಮಂಜೂರಿಗೆ ಸಂಪುಟ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ನಿರ್ಣಯಗಳನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಸುದ್ದಿಗಾರರಿಗೆ ವಿವರಿಸಿದರು. ನಾಲ್ಕನೇ ಶನಿವಾರದ ರಜೆ ಅನ್ವಯವಾಗದ ಸರ್ಕಾರಿ ನೌಕರರಿಗೆ 15 ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದರು.

ಶಿಕ್ಷಣ ಇಲಾಖೆಯ ನಲಿ-ಕಲಿ ಕಾರ್ಯಕ್ರಮದಲ್ಲಿ ಕಲಿಕಾ ಸಾಮಗ್ರಿ ಕೊಡಲು 27 ಕೋಟಿ ರೂ.ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿತು. ವಿವಿಧ ಜಿಲ್ಲೆಗಳಲ್ಲಿ 120 ಆಂಬುಲೆನ್ಸ್ ಖರೀದಿಗೆ 32 ಕೋಟಿ ರೂ. ಬಿಡುಗಡೆ. ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ವಿದ್ಯಾಲಯ ಮತ್ತು ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 263 ಕೋಟಿ ರೂ.ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಮಾಧು ಸ್ವಾಮೀ ವಿವರಿಸಿದರು.

Related posts