ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಿ.ಟಿ.ರವಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು.

ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲಎಂದು ವಾಗ್ದಾಳಿ ನಡೆಸಿದ ಅವರು, 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ,‌ ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸದನದ ಗಮನಸೆಳೆದರು.

ಆಗಿರುವ ಕಾಮಗಾರಿಯೂ ಸಮರ್ಪಕವಾಗಿ ನಡೆದಿಲ್ಲ ಎಂದ ಅವರು, ತ್ವರಿತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

Related posts