ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
https://publish.twitter.com/?query=https%3A%2F%2Ftwitter.com%2FBJP4Karnataka%2Fstatus%2F1899852358441665000&widget=Video
ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾರ್ಮಿಕವಾಗಿ ಹೇಳಿದ್ದಾರೆ.
ಗ್ರೇಟರ್ ಬೆಂಗಳೂರು ಎಂದು ವಿಭಾಗಿಸುವ ಮೂಲಕ ಲೂಟಿ ಹೊಡೆಯುವವರಿಗೆ ಅವಕಾಶ ಮಾಡಿಕೋಸಲಾಗುತ್ತಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ.