ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ; ಸಿಎಂ ಸ್ಪಷ್ಟನೆ

ಹಾವೇರಿ: ಚುನಾವಣೆ ನಂತರ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳು ಬಂದ್ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಹಾವೇರಿಯಲ್ಲಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಚುನಾವಣೆ ಮುಗಿದ ಮೇಲೆ ‘ಗೃಹಲಕ್ಷ್ಮಿ’ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ ಎಂದ ಸಿಎಂ, ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದೂ ಘೋಷಿಸಿದರು.

Related posts