ಆಪರೇಷನ್ ಕಮಲಕ್ಕೆ ಬಲಿಯಾದವರು ಸೇಫ್ ಅಲ್ಲ?

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ. ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರ್ಪಡೆಯಾಗಿರುವ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ದಿಸುವ ಅವಕಾಶ ಸಿಕ್ಕಿದೆಯಾದರೂ ಬಿಜೆಪಿ ಸರ್ಕಾರದಲ್ಲಿ ಪಾಲುದಾರನಾಗುವ ಹಿರಿಯ ರಾಜಕಾರಣಿ ಎಚ್‌.ವಿಶ್ವನಾಥ್ ಅವರ ಕನಸು ಇನ್ನೂ ಈಡೇರಿಲ್ಲ.

ಈ ಬಾರಿ ಮೇಲ್ಮನೆಗೆ ಆಯ್ಕೆಯಾಗುವ ಹೊಂಗನಸು ಹೊತ್ತ ಅವರಿಗೆ ಹೈಕಮಾಂಡ್ ಅಡ್ಡಿಯಾಯಿತು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಆಪರೇಷನ್ ಕಮಲಕ್ಕೆ ಬಲಿಯಾದವರು ರಾಜಕೀಯವಾಗಿ ಸೇಫ್ ಅಲ್ಲ ಎಂಬ ಎದುರಾಳಿ ಪಕ್ಷಗಳ ನಾಯಕರ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ ಬಿಜೆಪಿ ನಾಯಕರು.

ಈ ಮಧ್ಯೆ, ಹೆಚ್. ವಿಶ್ವನಾಥ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಕುರಿತಂತೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಜಗದೀಶ್ ಶೆಟ್ಟರ್, ವಿಶ್ವನಾಥ್ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ಕೊಟ್ಟು ಗೌರವಿಸಲಿದೆ ಎಂದಿದ್ದಾರೆ.

ಇದನ್ನೂ ಓದಿ.. ಈ ವರ್ಷ ಪೂರ್ವ ಪ್ರಾಥಮಿಕ ಶಾಲೆ ಬೇಡ; ಸರ್ಕಾರಕ್ಕೆ ಸಲಹೆ

Related posts