ಚಾಮರಾಜನಗರ: ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಶಾಲೆಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಅವರು ಶಾಲಾ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಿ ಗಮನಸೆಳೆದಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್‍ರವರು ಮೀಣ್ಯಂ, ನಕ್ಕುಂದಿ, ಗಾಜನೂರು, ಕೊಪ್ಪ ಮುಂತಾದ ಗ್ರಾಮಗಳಲ್ಲಿ ವಾಸವಿರುವ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಮಕ್ಕಳ ಕಲಿಕಾ ಪ್ರಗತಿಯನ್ನು ಪರಿಶೀಲಿಸಿದರು, ವಿದ್ಯಾರ್ಥಿಗಳ ಸಾಧನೆಗೆ ಪೋಷಕರು ಯಾವ ರೀತಿ ಮಕ್ಕಳಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂಬ ಬಗ್ಗೆ ಮಾಹಿತಿಯನ್ನು ತಿಳಿಸಿದರು.
ಶಾಲೆಗೆ ಗೈರು ಹಾಜರಾಗಿರುವ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಬರುವಂತೆ ಮನೆ ಮನೆಗೆ ತೆರಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಮನವೊಲಿಸಿದರು. ಹಾಗೂ ಎಸ್ಎ ಟಿಎಸ್ ನಲ್ಲಿ ಪೆಂಡಿಂಗ್ ಇರುವ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಕಂದವೇಲು ಕೂಡ್ಲೂರು ಸಿಆರ್‌ಪಿ ಷಣ್ಮುಗಂ,, ಪ್ರೌಢಶಾಲಾ ಸಹ ಶಿಕ್ಷಕ ರ ಅಧ್ಯಕ್ಷರು ಅಶೋಕ್, ಮೀಣ್ಯಂ ಗ್ರಾಮ ಪಂಚಾಯಿತಿಯ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.