ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿರುವ ಬಿಜೆಪಿಗೆ ಇದೀಗ ಬಂಡಾಯ ಸವಾಲಾಗಿದೆ. ಬಂಡಾಯ ಮುಖಂಡರ ವಿರುದ್ದ ನಿಷ್ಠೂರ ಕ್ರಮಕ್ಕೆ ನಿರ್ಧರಿಸಿರುವ ಬಿಜೆಪಿ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಮತ್ತು ಇತರ ಏಳು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಿದೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿಯೂ ಗೆಲುವು ಸಾಧಿಸಲೇಬೇಕೆಂದು ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ವಂಚಿತರ ಸವಾಲು ಎದುರಾಗಿದೆ.
ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸಹಿತ ಹಲವು ಮುಖಂಡರು ಸಂಧಾನಕ್ಕೆ ಮಣಿಯಲಿಲ್ಲ. ಈ ಹಿನ್ನೆಲೆಯಲ್ಲಿ ಏಳು ನಾಯಕರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.
ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ ಅವರ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಣದ ಮೂಲಗಳು ತಿಳಿಸಿವೆ.